ತುಂಗಭದ್ರಾ ನದಿಯಲ್ಲಿ ಮುಳುಗಿ ಅಣ್ಣ-ತಮ್ಮ ದಾರುಣ ಸಾವು; ತಂದೆಯ ಕಣ್ಮುಂದೆಯೇ ನೀರುಪಾಲಾದ ಮಕ್ಕಳು

Author Picture
Published On: March 22, 2026

—Election Update—

ಹರಪನಹಳ್ಳಿ: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲುವಾಗಲು ಗ್ರಾಮದ ಬಳಿ ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಭಾನುವಾರ ನಡೆದಿದೆ. ತಂದೆಯ ಕಣ್ಮುಂದೆಯೇ ಅಣ್ಣ-ತಮ್ಮ ಇಬ್ಬರು ಜಲಸಮಾಧಿಯಾಗಿದ್ದು, ಇಡೀ ಗ್ರಾಮವೇ ಶೋಕಸಾಗರದಲ್ಲಿ ಮುಳುಗಿದೆ.

ಮೃತರನ್ನು ಎಂ.ಜಿ. ಮನು (19) ಹಾಗೂ ಎಂ.ಜಿ. ಪ್ರಜ್ವಲ್ (18) ಎಂದು ಗುರುತಿಸಲಾಗಿದೆ. ತಂದೆ ಮಂಜಪ್ಪ ಅವರು ತಮ್ಮ ಮೂವರು ಮಕ್ಕಳಾದ ಮನು, ಪ್ರಜ್ವಲ್ ಮತ್ತು ಕಿರಿಯ ಪುತ್ರ ಚಿರಂಜೀವಿ (16) ಅವರೊಂದಿಗೆ ತುಂಗಭದ್ರಾ ನದಿಗೆ ಸ್ನಾನ ಮಾಡಲು ತೆರಳಿದ್ದಾಗ ಈ ಆಘಾತಕಾರಿ ದುರ್ಘಟನೆ ಸಂಭವಿಸಿದೆ.

ಘಟನೆಯ ಹಿನ್ನೆಲೆ: ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಮೂವರೂ ಮಕ್ಕಳು ಆಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಲುಕಿದ್ದಾರೆ. ಮಕ್ಕಳನ್ನು ರಕ್ಷಿಸಲು ಧಾವಿಸಿದ ತಂದೆ ಮಂಜಪ್ಪ ಅವರು, ಕಿರಿಯ ಪುತ್ರ 16 ವರ್ಷದ ಚಿರಂಜೀವಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಅವರ ಕಣ್ಣೆದುರಲ್ಲೇ ಹಿರಿಯ ಪುತ್ರರಾದ ಮನು ಮತ್ತು ಪ್ರಜ್ವಲ್ ನೀರಿನಲ್ಲಿ ಮುಳುಗಿದ್ದಾರೆ.

ತನ್ನಿಬ್ಬರು ಮಕ್ಕಳು ಕಣ್ಮುಂದೆಯೇ ನೀರುಪಾಲಾಗುತ್ತಿರುವುದನ್ನು ಕಂಡು ಅಸಹಾಯಕ ತಂದೆ ಮಂಜಪ್ಪ ಅವರು ರಕ್ಷಣೆಗಾಗಿ ಕೂಗಾಟ ನಡೆಸಿದ್ದಾರೆ. ಆದರೆ, ದುರದೃಷ್ಟವಶಾತ್ ಇಬ್ಬರೂ ಯುವಕರು ಪ್ರಾಣ ಕಳೆದುಕೊಂಡಿದ್ದಾರೆ.

ಈ ಹೃದಯವಿದ್ರಾವಕ ಘಟನೆಯಿಂದ ಹಲುವಾಗಲು ಗ್ರಾಮದಲ್ಲಿ ಶೋಕ ಮಡುಗಟ್ಟಿದ್ದು, ಮೃತರ ಮನೆ ಮುಂದೆ ಅಪಾರ ಸಂಖ್ಯೆಯಲ್ಲಿ ಗ್ರಾಮಸ್ಥರು ಜಮಾಯಿಸಿದ್ದಾರೆ. ಯುವಕರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

(ಮಧ್ಯ ಕರ್ನಾಟಕದ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಓದುತ್ತಿರಿ madhyakarnataka.live)

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

"ಮಧ್ಯ ಕರ್ನಾಟಕ ಲೈವ್ (Madhyakarnataka.live) ಕರ್ನಾಟಕದ ಹೃದಯಭಾಗದ ನೈಜ, ನಿಖರ ಮತ್ತು ಕ್ಷಣ ಕ್ಷಣದ ಸುದ್ದಿಗಳಿಗಾಗಿ ಮೀಸಲಾದ ಡಿಜಿಟಲ್ ಸುದ್ದಿ ವೇದಿಕೆಯಾಗಿದೆ. ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಮಧ್ಯ ಕರ್ನಾಟಕದ ಜಿಲ್ಲೆಗಳ ಸ್ಥಳೀಯ ಸಮಸ್ಯೆಗಳು, ರಾಜಕೀಯ, ಕೃಷಿ, ಶಿಕ್ಷಣ ಮತ್ತು ಸಾಂಸ್ಕೃತಿಕ ವಿದ್ಯಮಾನಗಳನ್ನು ಜಗತ್ತಿಗೆ ತಲುಪಿಸುವುದು ನಮ್ಮ ಗುರಿ. ನಾವು ಕೇವಲ ಸುದ್ದಿಯನ್ನಷ್ಟೇ ಅಲ್ಲ, ಜನರ ಧ್ವನಿಯಾಗಲು ಬಯಸುತ್ತೇವೆ."… Read More

Related News

Leave a Comment

Home
Web Stories
Instagram
WhatsApp