,

ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಗಲಿ ಗುರುಧ್ಯಾನ ಸಂಸ್ಥೆಯ 48 ವಿದ್ಯಾರ್ಥಿಗಳು ಆಯ್ಕೆ: ಜಿಲ್ಲೆಗೆ ಪ್ರಥಮ ಸ್ಥಾನ!

ಗುರುಧ್ಯಾನ ವಿದ್ಯಾಸಂಸ್ಥೆ ಜಿಗಲಿ ವಿದ್ಯಾರ್ಥಿಗಳು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಆಯ್ಕೆಯಾದ ಕನ್ನಡಪ್ರಭ ಪತ್ರಿಕೆಯ ವರದಿ

—Election Update—

ದಾವಣಗೆರೆ: ಜಿಲ್ಲೆಯ ಶೈಕ್ಷಣಿಕ ವಲಯದಲ್ಲಿ ಹರಿಹರ ತಾಲೂಕಿನ ಜಿಗಲಿ ಗ್ರಾಮದ ‘ಗುರುಧ್ಯಾನ ವಿದ್ಯಾಸಂಸ್ಥೆ’ ಮತ್ತೊಮ್ಮೆ ಐತಿಹಾಸಿಕ ಸಾಧನೆ ಮಾಡಿದೆ. 2026–27ನೇ ಸಾಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ ಈ ಸಂಸ್ಥೆಯ ಬರೋಬ್ಬರಿ 48 ವಿದ್ಯಾರ್ಥಿಗಳು ಆಯ್ಕೆಯಾಗುವ ಮೂಲಕ ದಾಖಲೆ ಬರೆದಿದ್ದಾರೆ.

ಒಂದೇ ಶಾಲೆಯಿಂದ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವಸತಿ‌ ಶಾಲೆಗೆ ಆಯ್ಕೆಯಾಗಿರುವುದು ಇಡೀ ದಾವಣಗೆರೆ ಜಿಲ್ಲೆಯಲ್ಲೇ ಪ್ರಥಮ ಹಾಗೂ ಏಕೈಕ ಸಾಧನೆಯಾಗಿದ್ದು, ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದೆ.

ಜಿಲ್ಲಾ ಟಾಪರ್ಸ್ ಆಗಿ ಮಿಂಚಿದ ಜಯಂತ್, ಇಂಚರ!

ಸಂಸ್ಥೆಯ ವಿದ್ಯಾರ್ಥಿಗಳಾದ ಎಂ. ಜೆ. ಜಯಂತ್ ಹಾಗೂ ಇಂಚರ ಗಂಗಾಧರ ನಿಟ್ಟೂರ್ ಅವರು ಶೇಕಡಾ 100 ಕ್ಕೆ 93 ಅಂಕಗಳನ್ನು ಪಡೆಯುವ ಮೂಲಕ ಜಿಲ್ಲೆಗೆ ಪ್ರಥಮ ರಾಂಕ್ (District Toppers) ಹಂಚಿಕೊಂಡಿದ್ದಾರೆ. ಇವರೊಂದಿಗೆ ಮತ್ತೊಬ್ಬ ಪ್ರತಿಭಾವಂತ ವಿದ್ಯಾರ್ಥಿನಿ ಯಶಸ್ವಿನಿ ಪಿ. ಅವರು ಜಿಲ್ಲೆಗೆ 4ನೇ ರಾಂಕ್ ಗಳಿಸಿ ಸಂಸ್ಥೆಗೆ ಹೆಮ್ಮೆ ತಂದಿದ್ದಾರೆ.

ಆಡಳಿತ ಮಂಡಳಿಯಿಂದ ಹಾರ್ದಿಕ ಅಭಿನಂದನೆ

ವಿದ್ಯಾರ್ಥಿಗಳ ಈ ಅಭೂತಪೂರ್ವ ಯಶಸ್ಸಿಗೆ ಸಂಸ್ಥೆಯ ಅಧ್ಯಕ್ಷರಾದ ಎಂ.ಕೆ. ಸ್ವಾಮಿ, ಕಾರ್ಯದರ್ಶಿ ಸಾನ್ನಿ ಎಂ.ಕೆ. ಸ್ವಾಮಿ, ನಿರ್ದೇಶಕರಾದ ನಾಗರಾಜ್ ಹಾಗೂ ಆಡಳಿತ ಮಂಡಳಿಯ ಎಲ್ಲಾ ಪದಾಧಿಕಾರಿಗಳು ಮತ್ತು ಶಿಕ್ಷಕ ವೃಂದದವರು ಜಿಗಲಿ ಗ್ರಾಮದ ಪರವಾಗಿ ವಿಜೇತ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಹಾರ್ದಿಕವಾಗಿ ಅಭಿನಂದಿಸಿದ್ದಾರೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp