,

ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್‌ಗೆ ಸಂಕಷ್ಟ: ಜಾತಿ ನಿಂದನೆ ಪ್ರಕರಣದಲ್ಲಿ ಬಂಧನ ವಾರಂಟ್ ಜಾರಿ!

Arrest warrant issued against Harihara BJP MLA BP Harish by Bengaluru court

—Election Update—

ದಾವಣಗೆರೆ : ಹರಿಹರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರಂಟ್ (NBW) ಹೊರಡಿಸಿದೆ. ಹಳೆಯ ಜಾತಿ ನಿಂದನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಪದೇ ಪದೇ ಗೈರುಹಾಜರಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಈ ಕಠಿಣ ಕ್ರಮ ಕೈಗೊಂಡಿದ್ದಾರೆ.

ಪ್ರಕರಣದ ಹಿನ್ನೆಲೆ ಏನು?

2023ರ ವಿಧಾನಸಭಾ ಚುನಾವಣೆಯ ಫಲಿತಾಂಶ ಬಂದ ಮರುದಿನ (ಮೇ 16, 2023), ಹರಿಹರ ನಗರಸಭೆಯ ಪೌರಕಾರ್ಮಿಕರು ಹಾಗೂ ಮಾದಿಗ ಸಮಾಜದ ಮುಖಂಡರು ಶಾಸಕ ಹರೀಶ್ ಅವರನ್ನು ಅಭಿನಂದಿಸಲು ಹೋಗಿದ್ದರು. ಈ ವೇಳೆ ಶಾಸಕರು, “ಒಳಮೀಸಲಾತಿ ನೀಡಿದ್ದರೂ ನಿಮ್ಮ ಸಮಾಜದವರು ನಮಗೆ ಮತ ನೀಡಿಲ್ಲ” ಎಂದು ಆಕ್ಷೇಪಾರ್ಹ ಹಾಗೂ ಅವಹೇಳನಕಾರಿ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

ಈ ಕುರಿತು ಬಿಎಸ್ಪಿ (BSP) ಮುಖಂಡ ಹನುಮಂತಪ್ಪ ಅವರು ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ವಾರಂಟ್ ಜಾರಿಗೆ ಕಾರಣ:

ಈ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯವು ಶಾಸಕರಿಗೆ ಹಲವು ಬಾರಿ ಸೂಚನೆ ನೀಡಿತ್ತು. ಆದರೆ ಶಾಸಕ ಹರೀಶ್ ಅಥವಾ ಅವರ ಪರ ವಕೀಲರು ನ್ಯಾಯಾಲಯಕ್ಕೆ ಹಾಜರಾಗುತ್ತಿರಲಿಲ್ಲ. ನ್ಯಾಯಾಲಯದ ಆದೇಶವನ್ನು ಗಂಭೀರವಾಗಿ ಪರಿಗಣಿಸಿದ ವಿಶೇಷ ನ್ಯಾಯಾಲಯವು, ಶಾಸಕರನ್ನು ಮೇ 7, 2026 ರೊಳಗೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಹರಿಹರ ಠಾಣಾಧಿಕಾರಿಗೆ ಖಡಕ್ ನಿರ್ದೇಶನ ನೀಡಿದೆ.

ಮುಂದೇನು?

ನ್ಯಾಯಾಲಯದ ಈ ಆದೇಶದಿಂದಾಗಿ ಶಾಸಕರಿಗೆ ಬಂಧನದ ಭೀತಿ ಎದುರಾಗಿದೆ. ಹೈಕೋರ್ಟ್‌ನಲ್ಲಿ ಪ್ರಕರಣ ರದ್ದುಗೊಳಿಸಲು ಅವರು ಪ್ರಯತ್ನಿಸಿದ್ದರೂ ಯಶಸ್ವಿಯಾಗದ ಕಾರಣ, ಈಗ ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗುವುದು ಅನಿವಾರ್ಯವಾಗಿದೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp