,

ಹರಿಹರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಂತರಜಿಲ್ಲಾ ಬೈಕ್ ಕಳ್ಳ ಅಬ್ದುಲ್ ಬಂಧನ, 7 ಬೈಕ್ ಹಾಗೂ ಟಾಟಾ ಏಸ್ ವಶ

ಹರಿಹರ ನಗರ ಪೊಲೀಸ್ ಠಾಣೆಯ ಮುಂದೆ ವಶಪಡಿಸಿಕೊಂಡ 7 ಬೈಕ್ ಮತ್ತು ಟಾಟಾ ಏಸ್ ವಾಹನಗಳೊಂದಿಗೆ ಪೊಲೀಸರು.
— ಹರಿಹರ ಪೊಲೀಸರಿಂದ ಬಂಧಿತನಾದ ಅಂತರಜಿಲ್ಲಾ ಬೈಕ್ ಕಳ್ಳ ಮತ್ತು ವಶಪಡಿಸಿಕೊಳ್ಳಲಾದ ವಾಹನಗಳು.

—Advertisement—

📍 ದಾವಣಗೆರೆ ದಕ್ಷಿಣ

ಉಪಸಮರ - 2026

ಮಹಾ ಕದನ: ಯಾರಿಗೆ ಒಲಿಯಲಿದೆ ಟಿಕೆಟ್?

Samarth Jabbar Vinay Ajay Yashwanth
ಕ್ಷಣ ಕ್ಷಣದ ಲೈವ್ ಅಪ್ಡೇಟ್ಸ್ ➔

ದಾವಣಗೆರೆ: ಹರಿಹರ, ಹರಪನಹಳ್ಳಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಅಂತರಜಿಲ್ಲಾ ಖದೀಮನನ್ನು ಹರಿಹರ ನಗರ ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಘಟನೆಯ ಹಿನ್ನೆಲೆ:

ಕಳೆದ ಆಗಸ್ಟ್ 8, 2025 ರಂದು ಹರಿಹರದ ನಿವಾಸಿ ಅಭಿಷೇಕ್ ಎಂಬುವವರು ತಮ್ಮ ರಾಯಲ್ ಎನ್‌ಫೀಲ್ಡ್ ಬೈಕ್ ಕಳ್ಳತನವಾಗಿರುವ ಬಗ್ಗೆ ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಕಳ್ಳನ ಪತ್ತೆಗೆ ವಿಶೇಷ ತಂಡವನ್ನು ರಚಿಸಿದ್ದರು.

ಖದೀಮ ಸಿಕ್ಕಿಬಿದ್ದಿದ್ದು ಹೇಗೆ?

ಹರಿಹರ ನಗರದ ಹರಪನಹಳ್ಳಿ ರಸ್ತೆಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದಾಗ, ಸಂಶಯಾಸ್ಪದವಾಗಿ ಟಾಟಾ ಏಸ್ ವಾಹನದಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ತಡೆಯಲು ಯತ್ನಿಸಿದರು. ಪೊಲೀಸರನ್ನು ಕಂಡು ಆರೋಪಿಯು ವಾಹನ ಬಿಟ್ಟು ಪರಾರಿಯಾಗಲು ಯತ್ನಿಸಿದಾಗ, ಪೊಲೀಸರು ಆತನನ್ನು ಬೆನ್ನಟ್ಟಿ ಹಿಡಿಯುವಲ್ಲಿ ಯಶಸ್ವಿಯಾದರು.

4.25 ಲಕ್ಷ ಮೌಲ್ಯದ ಸ್ವತ್ತು ವಶ:

ಬಂಧಿತ ಆರೋಪಿಯನ್ನು ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಪ್ಪುಕಿನ ಅಪ್ಪು ಅಲಿಯಾಸ್ ಅಬ್ದುಲ್ ಎಂದು ಗುರುತಿಸಲಾಗಿದೆ. ಈತನಿಂದ ಪೊಲೀಸರು ಈ ಕೆಳಗಿನವುಗಳನ್ನು ವಶಪಡಿಸಿಕೊಂಡಿದ್ದಾರೆ:

  • ಒಟ್ಟು 7 ದ್ವಿಚಕ್ರ ವಾಹನಗಳು.

  • ಒಂದು ಟಾಟಾ ಏಸ್ ನಾಲ್ಕು ಚಕ್ರದ ವಾಹನ.

  • ವಶಪಡಿಸಿಕೊಂಡ ಎಲ್ಲಾ ವಾಹನಗಳ ಒಟ್ಟು ಮೌಲ್ಯ ಸುಮಾರು 4.25 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲು:

ಬಂಧಿತ ಅಬ್ದುಲ್ ವಿಚಾರಣೆ ನಡೆಸಿದಾಗ ಈತನ ವಿರುದ್ಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 8 ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ.

  • ಹರಿಹರ ನಗರ ಠಾಣೆಯಲ್ಲಿ 1 ಬೈಕ್ ಕಳ್ಳತನ ಪ್ರಕರಣ.

  • ಹರಪನಹಳ್ಳಿ ಠಾಣೆಯಲ್ಲಿ 2 ಪ್ರಕರಣಗಳು.

  • ತುಮಕೂರು ಠಾಣೆಯಲ್ಲಿ 1 ಪ್ರಕರಣ.

  • ಹೊನ್ನಾಳಿ ಠಾಣೆಯಲ್ಲಿ 1 ಪ್ರಕರಣ.

  • ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಟಾಟಾ ಏಸ್ ಕಳ್ಳತನದ ಪ್ರಕರಣ.

ಹರಿಹರ ಪೊಲೀಸರ ಈ ಕ್ಷಿಪ್ರ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Leave a Comment

Home
Web Stories
Instagram
WhatsApp