,

ಹರಿಹರ: ಇಂದು 3ನೇ ಬಾರಿ ಪೊಲೀಸ್ ವಿಚಾರಣೆಗೆ ಹಾಜರಾಗಲಿರುವ ವಚನಾನಂದ ಸ್ವಾಮೀಜಿ!

vachanananda-swamiji

—Election Update—

ಹರಿಹರ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಇತ್ತೀಚೆಗೆ ಉಚ್ಚಾಟನೆಗೊಂಡಿರುವ ವಚನಾನಂದ ಸ್ವಾಮೀಜಿ ವಿರುದ್ಧದ ಪೋಕ್ಸೋ (POCSO) ಪ್ರಕರಣದ ತನಿಖೆ ತೀವ್ರಗೊಂಡಿದೆ. ಈ ದೌರ್ಜನ್ಯದ ಆರೋಪಕ್ಕೆ ಸಂಬಂಧಿಸಿದಂತೆ ಸ್ವಾಮೀಜಿ ಅವರು ಇಂದು ಬೆಳಗ್ಗೆ 10 ಗಂಟೆಗೆ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂರನೇ ಬಾರಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ.

ಮಠದ ವಸತಿ ನಿಲಯದಲ್ಲಿದ್ದ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಲೈಂಗಿಕ ಶೋಷಣೆ ಹಾಗೂ ದೈಹಿಕ ಕಿರುಕುಳ ನೀಡಿದ ಗಂಭೀರ ಆರೋಪ ಸ್ವಾಮೀಜಿ ಮೇಲಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಶ್ರೀಗಳ ನಿರೀಕ್ಷಣಾ ಜಾಮೀನು ರದ್ದುಪಡಿಸಲು ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಗದಗದಿಂದ ಹರಿಹರಕ್ಕೆ ವರ್ಗಾವಣೆಯಾದ ಪ್ರಕರಣ

ಮಠದ ಹಾಸ್ಟೆಲ್ ಬಾಲಕನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಸಂತ್ರಸ್ತ ಬಾಲಕನ ಪೋಷಕರು ಮೊದಲು ಗದಗದ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಲ್ಲಿ ಶೂನ್ಯ ಎಫ್‌ಐಆರ್ (Zero FIR) ದಾಖಲಿಸಿಕೊಳ್ಳಲಾಗಿತ್ತು. ಆದರೆ, ಆರೋಪಿತ ಘಟನೆ ನಡೆದಿರುವ ಸ್ಥಳ ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವುದರಿಂದ ಪ್ರಕರಣವನ್ನು ಮುಂದಿನ ತನಿಖೆಗಾಗಿ ಹರಿಹರಕ್ಕೆ ವರ್ಗಾಯಿಸಲಾಯಿತು.

ಸಿಪಿಐ ಸುರೇಶ್ ಸಗರಿ ನೇತೃತ್ವದಲ್ಲಿ ಗ್ರಿಲ್

ಇಂದು ನಡೆಯಲಿರುವ ಮೂರನೇ ಹಂತದ ವಿಚಾರಣೆಯನ್ನು ಸಿಪಿಐ ಸುರೇಶ್ ಸಗರಿ ಹಾಗೂ ಪಿಎಸ್ಐ ಜಯರತ್ನಮ್ಮ ಅವರ ನೇತೃತ್ವದ ಪೊಲೀಸ್ ತಂಡ ನಡೆಸಲಿದೆ. ಈಗಾಗಲೇ ಹಿಂದಿನ ವಿಚಾರಣೆ ವೇಳೆ ಪೊಲೀಸರು ಸ್ವಾಮೀಜಿಯನ್ನು ಸುದೀರ್ಘವಾಗಿ ಪ್ರಶ್ನಿಸಿದ್ದು, ವೈದ್ಯಕೀಯ ಪರೀಕ್ಷೆಗೂ ಒಳಪಡಿಸಿದ್ದಾರೆ. ಉಗುರು, ಕೂದಲು ಹಾಗೂ ಬಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ.

ಜಾಮೀನು ರದ್ದುಗೊಳಿಸಲು ಪೊಲೀಸರ ಅರ್ಜಿ

ವಚನಾನಂದ ಸ್ವಾಮೀಜಿ ಅವರು ಈಗಾಗಲೇ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ. ಆದರೆ ಪ್ರಕರಣದ ಗಾಂಭೀರ್ಯತೆಯನ್ನು ಪರಿಗಣಿಸಿ, ತನಿಖೆಗೆ ಸ್ವಾಮೀಜಿಯವರನ್ನು ವಶಕ್ಕೆ ಪಡೆಯುವ ಅಗತ್ಯವಿರುವುದರಿಂದ ಅವರ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಪೊಲೀಸರು ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯದ ನಿರ್ಧಾರದ ಮೇಲೆ ಸ್ವಾಮೀಜಿಯವರ ಬಂಧನದ ಭವಿಷ್ಯ ನಿರ್ಧಾರವಾಗಲಿದೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp