ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಪ್ರವೇಶಾತಿ ಆರಂಭ: ತಿಂಗಳಿಗೆ ₹2,500 ಶಿಷ್ಯವೇತನದ ಸೌಲಭ್ಯ

handloom-textile-technology-diploma-karnataka

—Election Update—

ದಾವಣಗೆರೆ: ಜಿಲ್ಲೆಯ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗ ಹಾಗೂ ತಾಂತ್ರಿಕ ಶಿಕ್ಷಣ ನೀಡುವ ಉದ್ದೇಶದಿಂದ ಕೈಮಗ್ಗ ಮತ್ತು ಜವಳಿ ಇಲಾಖೆಯು 2026-27ನೇ ಶೈಕ್ಷಣಿಕ ಸಾಲಿನ ಡಿಪ್ಲೋಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನಿಸಿದೆ. ಗದಗ-ಬೆಟಗೇರಿಯ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ (KHTI) ಈ ಪ್ರವೇಶಾತಿ ಪ್ರಕ್ರಿಯೆ ನಡೆಯಲಿದೆ.

ಕೋರ್ಸ್ ವಿವರ ಮತ್ತು ಅರ್ಹತೆ:

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ (DHTT) ಹಾಗೂ ನೇರ ಎರಡನೇ ವರ್ಷದ ಪ್ರವೇಶಾತಿ (Lateral Entry) ಪಡೆಯಲು ಅವಕಾಶವಿದೆ.

ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಭಾಷೆಯನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಜುಲೈ 01, 2026ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದವರಿಗೆ ಗರಿಷ್ಠ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಿಗೆ 25 ವರ್ಷ ಮೀರಿರಬಾರದು.

ವಿದ್ಯಾರ್ಥಿಗಳಿಗೆ ಸಿಗುವ ಸೌಲಭ್ಯಗಳು:

ಈ ಕೋರ್ಸ್‌ಗೆ ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೂ ಸರ್ಕಾರದಿಂದ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು. ಇದು ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.

ಅರ್ಜಿ ಸಲ್ಲಿಕೆ ಹೇಗೆ?

ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು:

ಪ್ರಥಮ ವರ್ಷದ ಪ್ರವೇಶಕ್ಕೆ: https://khtigadag.ac.in/AdmissionForm.pdf

ಎರಡನೇ ವರ್ಷದ ನೇರ ಪ್ರವೇಶಕ್ಕೆ: https://khtigadag.ac.in/Lateralentryadmissionform.pdf
​ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮೇ 30, 2026 ರೊಳಗೆ “ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-582102” ಈ ವಿಳಾಸಕ್ಕೆ ತಲುಪಿಸಬೇಕು.

ಸಂಪರ್ಕ ಮಾಹಿತಿ:

ಹೆಚ್ಚಿನ ಮಾಹಿತಿಗಾಗಿ ದಾವಣಗೆರೆಯ ಜಿಲ್ಲಾ ಪಂಚಾಯತ್ ಆವರಣದಲ್ಲಿರುವ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಕಾಲೇಜು ರಸ್ತೆ, ನಿಟ್ಟುವಳ್ಳಿ ಇವರನ್ನು ಖುದ್ದಾಗಿ ಭೇಟಿ ಮಾಡಬಹುದು ಅಥವಾ ದೂರವಾಣಿ ಸಂಖ್ಯೆ 08192-262362 ಕ್ಕೆ ಕರೆ ಮಾಡಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

ಸಲಹೆ: ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp