ಇಂದು ಯುಜಿ ಸಿಇಟಿ-2026 ಫಲಿತಾಂಶ ಪ್ರಕಟ: ರಿಸಲ್ಟ್ ಲಿಂಕ್ ಹಾಗೂ ಸಮಯದ ವಿವರ ಇಲ್ಲಿದೆ

karnataka-kea-ugcet-results

—Election Update—

ಬೆಂಗಳೂರು: ಪ್ರಸಕ್ತ ಸಾಲಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕಾಯುತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಮಹತ್ವದ ಸುದ್ದಿಯೊಂದನ್ನು ನೀಡಿದೆ. 2026ರ ಏಪ್ರಿಲ್ 22, 23 ಮತ್ತು 24ರಂದು ಯಶಸ್ವಿಯಾಗಿ ನಡೆದಿದ್ದ ಯುಜಿ ಸಿಇಟಿ (UG CET-2026) ಪರೀಕ್ಷೆಯ ಫಲಿತಾಂಶವು ಇಂದು (ಜೂನ್ 6) ಅಧಿಕೃತವಾಗಿ ಪ್ರಕಟಗೊಳ್ಳಲಿದೆ.

ಮಧ್ಯಾಹ್ನ 2 ಗಂಟೆಯ ನಂತರ ಲಿಂಕ್ ಸಕ್ರಿಯ:

ಇಂದು ಬೆಳಿಗ್ಗೆ 12 ಗಂಟೆಗೆ ಸರಿಯಾಗಿ ವೈದ್ಯಕೀಯ ಶಿಕ್ಷಣ ಸಚಿವರಾದ ಶರಣು ಪ್ರಕಾಶ್ ಪಾಟೀಲ್ ಅವರು ಸುದ್ದಿಗೋಷ್ಠಿ ನಡೆಸುವ ಮೂಲಕ ಅಧಿಕೃತವಾಗಿ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದಾರೆ. ಸುದ್ದಿಗೋಷ್ಠಿಯ ಬಳಿಕ, ಅಂದರೆ ಮಧ್ಯಾಹ್ನ 2 ಗಂಟೆಯ ನಂತರ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗಳ ಮೂಲಕ ತಮ್ಮ ಅಂಕಪಟ್ಟಿ ಮತ್ತು ರ‍್ಯಾಂಕ್ ವಿವರಗಳನ್ನು ಪರಿಶೀಲಿಸಬಹುದಾಗಿದೆ.

ಫಲಿತಾಂಶ ವೀಕ್ಷಿಸುವುದು ಹೇಗೆ?

ವಿದ್ಯಾರ್ಥಿಗಳು ಇಲಾಖೆಯ ಕೆಳಗಿನ ಅಧಿಕೃತ ಪೋರ್ಟಲ್‌ಗಳಿಗೆ ಭೇಟಿ ನೀಡಿ ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದು:
https://keaonline.karnataka.gov.in/ugcet_2026_results

https://cetonline.karnataka.gov.in/kea
​ರಾಜ್ಯಾದ್ಯಂತ ಎಂಜಿನಿಯರಿಂಗ್, ಕೃಷಿ, ಫಾರ್ಮಸಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಸೀಟು ಆಕಾಂಕ್ಷಿಗಳಿಗೆ ಈ ಫಲಿತಾಂಶ ಅತ್ಯಂತ ನಿರ್ಣಾಯಕವಾಗಿದ್ದು, ಫಲಿತಾಂಶ ಪ್ರಕಟವಾದ ತಕ್ಷಣವೇ ಸರ್ವರ್ ದಟ್ಟಣೆಯನ್ನು ತಪ್ಪಿಸಲು ಪ್ರಾಧಿಕಾರವು ಎರಡು ಪ್ರತ್ಯೇಕ ಲಿಂಕ್‌ಗಳ ವ್ಯವಸ್ಥೆ ಮಾಡಿದೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp