ದಾವಣಗೆರೆ: ಕರ್ನಾಟಕ ರಾಜಕೀಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯ ಕಾವು ಈಗಿನಿಂದಲೇ ಶುರುವಾಗಿದೆ. ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರು ಶನಿವಾರ ದಾವಣಗೆರೆಯಲ್ಲಿ ಮಾತನಾಡಿ, 2028ರ ಸಾರ್ವತ್ರಿಕ ಚುನಾವಣೆಯ ಪೂರ್ವತಯಾರಿಯಾಗಿ ಚಿತ್ರದುರ್ಗದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಘೋಷಿಸಿದರು.
ಚಿತ್ರದುರ್ಗದಲ್ಲಿ ಮೇ 9ಕ್ಕೆ ಬೃಹತ್ ಸಮಾವೇಶ
“ಬರುವ ಮೇ 9ರಂದು ಕೋಟೆನಾಡು ಚಿತ್ರದುರ್ಗದಲ್ಲಿ ಬೃಹತ್ ಜನಸಂದಣಿಯೊಂದಿಗೆ 2028ರ ಚುನಾವಣೆಯ ರಣಕಹಳೆ ಮೊಳಗಿಸಲಾಗುವುದು. ಈ ಸಮಾವೇಶವು ಕೇವಲ ರಾಜಕೀಯ ಕಾರ್ಯಕ್ರಮವಲ್ಲ, ಇದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ನಾಯಕತ್ವ ಮತ್ತು ಶಕ್ತಿಯನ್ನು ಮತ್ತಷ್ಟು ಬಲಪಡಿಸುವ ವೇದಿಕೆಯಾಗಲಿದೆ” ಎಂದು ಬಿ.ಸಿ. ಪಾಟೀಲ್ ತಿಳಿಸಿದರು. ಈ ಸಮಾವೇಶದಲ್ಲಿ ಲಕ್ಷಾಂತರ ಬೆಂಬಲಿಗರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಅವರು ಮನವಿ ಮಾಡಿದರು.
ದಾವಣಗೆರೆಯೊಂದಿಗೆ ಭಾವನಾತ್ಮಕ ನಂಟು
ತಮ್ಮ ರಾಜಕೀಯ ಮತ್ತು ವೈಯಕ್ತಿಕ ಜೀವನದ ಹಳೆಯ ನೆನಪುಗಳನ್ನು ಹಂಚಿಕೊಂಡ ಪಾಟೀಲ್, “ದಾವಣಗೆರೆ ನನ್ನ ವಿದ್ಯಾಭೂಮಿ ಮತ್ತು ಕರ್ಮಭೂಮಿ. ಇಲ್ಲಿನ ಮಣ್ಣಿನೊಂದಿಗೆ ನನಗೆ ಅವಿನಾಭಾವ ಸಂಬಂಧವಿದೆ” ಎಂದರು. ಇದೇ ಸಂದರ್ಭದಲ್ಲಿ ಸಿನಿಮಾ ರಂಗದ ಕುರಿತು ಮಾತನಾಡುತ್ತಾ, ಟಿಪ್ಪು ಸುಲ್ತಾನ್ ನಾಟಕದ ಪ್ರೇರಣೆಯಿಂದಲೇ ತಾವು ಅಂದು ಸೂಪರ್ ಹಿಟ್ ‘ನಿಷ್ಕರ್ಷ’ ಚಲನಚಿತ್ರವನ್ನು ನಿರ್ಮಿಸಿದ್ದಾಗಿ ಮೆಲುಕು ಹಾಕಿದರು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಬಿ.ಎಸ್.ವೈ ಬೆಂಬಲಕ್ಕೆ ನಿಲ್ಲಲು ಕರೆ
ರಾಜ್ಯ ರಾಜಕಾರಣದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಅನಿವಾರ್ಯತೆಯನ್ನು ಒತ್ತಿ ಹೇಳಿದ ಅವರು, ಅವರ ಕೈ ಬಲಪಡಿಸಲು ಪ್ರತಿಯೊಬ್ಬ ಕಾರ್ಯಕರ್ತರು ಮತ್ತು ಅಭಿಮಾನಿಗಳು ಚಿತ್ರದುರ್ಗದ ಸಮಾವೇಶಕ್ಕೆ ಆಗಮಿಸಬೇಕು ಎಂದು ಕರೆ ನೀಡಿದರು.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
