ಬೆಂಗಳೂರು: 2026ನೇ ಸಾಲಿನ ಎಸ್ಎಸ್ಎಲ್ಸಿ (SSLC) ಮತ್ತು ದ್ವಿತೀಯ ಪಿಯುಸಿ (II PUC) ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪರೀಕ್ಷಾ ದಿನಾಂಕಗಳನ್ನು ಘೋಷಿಸಿದ್ದು, ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ ಹಾಗೂ ಮಾರ್ಚ್ 18 ರಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಲಿವೆ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಶುಭ ಹಾರೈಸಿರುವ ಸಚಿವರು, “ಆಲ್ ದಿ ಬೆಸ್ಟ್ ಮಕ್ಕಳೇ, ಚೆನ್ನಾಗಿ ಓದಿಕೊಳ್ಳಿ” ಎಂದು ಕಿವಿಮಾತು ಹೇಳಿದ್ದಾರೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಸುಗಮ ಪರೀಕ್ಷೆಗಾಗಿ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಎಸ್ಎಸ್ಎಲ್ಸಿ (SSLC) ಪರೀಕ್ಷೆ-1 ವೇಳಾಪಟ್ಟಿ
- ಮಾರ್ಚ್ 18: ಪ್ರಥಮ ಭಾಷೆ (ಕನ್ನಡ ಸೇರಿದಂತೆ)
- ಮಾರ್ಚ್ 23: ವಿಜ್ಞಾನ
- ಮಾರ್ಚ್ 25: ದ್ವಿತೀಯ ಭಾಷೆ (ಇಂಗ್ಲಿಷ್)
- ಮಾರ್ಚ್ 28: ಗಣಿತ
- ಮಾರ್ಚ್ 30: ತೃತೀಯ ಭಾಷೆ (ಹಿಂದಿ ಇತರೆ)
- ಏಪ್ರಿಲ್ 2: ಸಮಾಜ ವಿಜ್ಞಾನ
ದ್ವಿತೀಯ ಪಿಯುಸಿ (II PUC) ಪ್ರಮುಖ ವೇಳಾಪಟ್ಟಿ
- ಫೆಬ್ರವರಿ 28: ಕನ್ನಡ, ಅರೇಬಿಕ್
- ಮಾರ್ಚ್ 2: ಇತಿಹಾಸ, ಭೌತಶಾಸ್ತ್ರ (Physics)
- ಮಾರ್ಚ್ 3: ಇಂಗ್ಲಿಷ್
- ಮಾರ್ಚ್ 7: ರಸಾಯನಶಾಸ್ತ್ರ (Chemistry),
- ವ್ಯವಹಾರ ಅಧ್ಯಯನ (Business Studies)
- ಮಾರ್ಚ್ 10: ಅರ್ಥಶಾಸ್ತ್ರ (Economics)
- ಮಾರ್ಚ್ 11: ತರ್ಕಶಾಸ್ತ್ರ, ಗೃಹ ವಿಜ್ಞಾನ
- ಮಾರ್ಚ್ 13: ರಾಜ್ಯಶಾಸ್ತ್ರ (Political Science)
- ಮಾರ್ಚ್ 14: ಲೆಕ್ಕಶಾಸ್ತ್ರ (Accountancy), ಗಣಿತ (Mathematics)
- ಮಾರ್ಚ್ 16: ಸಮಾಜಶಾಸ್ತ್ರ, ಜೀವಶಾಸ್ತ್ರ (Biology), ಗಣಕ ವಿಜ್ಞಾನ (Computer Science)
- ಮಾರ್ಚ್ 17: ಹಿಂದಿ
ಪರೀಕ್ಷಾ ಹೈಲೈಟ್ಸ್ ಮತ್ತು ಕಟ್ಟುನಿಟ್ಟಿನ ಕ್ರಮಗಳು:
ನೋಂದಣಿ ವಿವರ: ಎಸ್ಎಸ್ಎಲ್ಸಿ ಪರೀಕ್ಷೆಗೆ ಒಟ್ಟು 9,02,889 ವಿದ್ಯಾರ್ಥಿಗಳು ಹಾಗೂ ದ್ವಿತೀಯ ಪಿಯುಸಿಗೆ 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ವೆಬ್ ಕಾಸ್ಟಿಂಗ್ ಕಣ್ಗಾವಲು: ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್ ಮೂಲಕ ನೇರ ನಿಗಾ ಇಡಲಾಗುತ್ತದೆ.
ಮೊಬೈಲ್ ನಿಷೇಧ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಮತ್ತು ಪರೀಕ್ಷಾ ಸಿಬ್ಬಂದಿಗೂ ಮೊಬೈಲ್ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ.
ಸಾಮಾಜಿಕ ಜಾಲತಾಣದ ಮೇಲೆ ಕಣ್ಣು: ಫೇಸ್ಬುಕ್, ವಾಟ್ಸಾಪ್, ಇನ್ಸ್ಟಾಗ್ರಾಮ್ಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ವಿದ್ಯಾರ್ಥಿಗಳಿಗೆ ಸಹಾಯವಾಣಿ:
ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಯಾವುದೇ ಗೊಂದಲಗಳಿದ್ದರೆ ಅಥವಾ ಆತಂಕವಿದ್ದರೆ ಶಿಕ್ಷಣ ಇಲಾಖೆಯ ಸಹಾಯವಾಣಿಗೆ ಕರೆ ಮಾಡಬಹುದು.ದೂ ರವಾಣಿ ಸಂಖ್ಯೆಗಳು: 080-23310076 / 080-23310075
ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆಯನ್ನು ಎದುರಿಸಲು ಸಚಿವರು ಕರೆ ನೀಡಿದ್ದಾರೆ.
ವರದಿ: ಮಧ್ಯ ಕರ್ನಾಟಕ ಲೈವ್ (Madhyakarnataka.live)
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
madhayakarnatakalive@gmail.com
