ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಾರುತಗಳು ಸಂಪೂರ್ಣವಾಗಿ ಚುರುಕುಗೊಂಡಿದ್ದು, ವರುಣನ ಆರ್ಭಟ ಜೋರಾಗಿದೆ. ಮುಂದಿನ ಆರು ದಿನಗಳ ಕಾಲ (ಜೂನ್ 13 ರವರೆಗೆ) ಕರ್ನಾಟಕದಾದ್ಯಂತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮಳೆಯ ತೀವ್ರತೆ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ‘ರೆಡ್ ಅಲರ್ಟ್’ ಹಾಗೂ ‘ಆರೆಂಜ್ ಅಲರ್ಟ್’ ಘೋಷಿಸಿದೆ.
ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿಯ ಪರಿಣಾಮವಾಗಿ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಪ್ರಕೃತಿ ವಿಕೋಪ ಸಂಭವಿಸುವ ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಈ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ:
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಮಲೆನಾಡು ಮತ್ತು ಕರಾವಳಿ ಭಾಗದ ಪ್ರಮುಖ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಅತ್ಯಂತ ಭೀಕರ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಜೂನ್ 13ರವರೆಗೆ ಅತ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ‘ರೆಡ್ ಅಲರ್ಟ್’ ಜಾರಿಗೊಳಿಸಲಾಗಿದೆ. ಕರಾವಳಿ ಭಾಗದಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

‘ಆರೆಂಜ್ ಅಲರ್ಟ್’ ಪಡೆದ ಜಿಲ್ಲೆಗಳು:
ಉಳಿದಂತೆ ಉತ್ತರ ಕರ್ನಾಟಕ ಹಾಗೂ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ದಾವಣಗೆರೆ, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಈ ಭಾಗಗಳಲ್ಲೂ ಮುಂಗಾರು ಮಳೆಯ ಆರ್ಭಟ ಜೋರಾಗಿಯೇ ಇರಲಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುವ ಸಾಧ್ಯತೆ ಇದೆ.
ಮಲೆನಾಡಿನ ಪ್ರಕೃತಿ ವಿಕೋಪ ಪೀಡಿತ ಪ್ರದೇಶಗಳು ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ (Landslides) ಉಂಟಾಗುವ ಆತಂಕ ಇರುವುದರಿಂದ ವಾಹನ ಸವಾರರು ಜಾಗರೂಕರಾಗಿರಬೇಕು ಎಂದು ಸ್ಥಳೀಯ ಆಡಳಿತಗಳು ಹೈ ಅಲರ್ಟ್ ಘೋಷಿಸಿವೆ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
