ಚಿತ್ರದುರ್ಗ: ಪರಿಸರ ಉಳಿಸಿ ಬೆಳೆಸುವುದೇ ನಾವು ಮುಂದಿನ ಪೀಳಿಗೆಗೆ ಕೊಡುವ ಅತ್ಯುತ್ತಮ ಕೊಡುಗೆಯಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯನ್ನು ತಮ್ಮ ಆದ್ಯ ಕರ್ತವ್ಯವನ್ನಾಗಿ ಮಾಡಿಕೊಳ್ಳಬೇಕು ಎಂದು ಕೂನಬೇವು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಸ್.ಹನುಮಂತಪ್ಪ ತಿಳಿಸಿದರು.
ಚಿತ್ರದುರ್ಗ ತಾಲ್ಲೂಕಿನ ಕೂನಬೇವು ಗ್ರಾಮ ಪಂಚಾಯಿತಿ ವತಿಯಿಂದ ಗುರುವಾರ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಅವರು ಮಾತನಾಡಿದರು.
ಭವಿಷ್ಯದಲ್ಲಿ ಎದುರಾಗಬಹುದಾದ ಮಳೆಯ ಅಭಾವ, ಆಮ್ಲಜನಕದ ಕೊರತೆ ಹಾಗೂ ಹೆಚ್ಚುತ್ತಿರುವ ಜಾಗತಿಕ ತಾಪಮಾನದಂತಹ ಜ್ವಲಂತ ಸಮಸ್ಯೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮರಗಳನ್ನು ಬೆಳೆಸುವುದೊಂದೇ ಏಕೈಕ ಪರಿಹಾರವಾಗಿದೆ. ಪ್ರಧಾನಮಂತ್ರಿಗಳ ಆಶಯದಂತೆ ಪ್ರತಿಯೊಬ್ಬ ವಿದ್ಯಾರ್ಥಿಯೂ ‘ಅಮ್ಮನ ಹೆಸರಿನಲ್ಲಿ ಒಂದು ಮರ’ವನ್ನು ನೆಟ್ಟು ಪೋಷಿಸುವ ಮೂಲಕ ಪರಿಸರ ಸೇವೆಯಲ್ಲಿ ಪಾಲ್ಗೊಳ್ಳಬೇಕು ಎಂದರು.

ಕೂನಬೇವು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಧನಂಜಯ ರೆಡ್ಡಿ ಮಾತನಾಡಿ, ಉತ್ತಮವಾದ ಪರಿಸರದಿಂದ ಮಾತ್ರ ಉತ್ತಮ ಆರೋಗ್ಯ ಸಾಧ್ಯ. ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಪೋಷಿಸುವುದರಿಂದ ಮುಂದೆ ಸಂಭವಿಸಬಹುದಾದ ಭೀಕರ ಬರಗಾಲ ಹಾಗೂ ತಾಪಮಾನ ಏರಿಕೆಯನ್ನು ತಡೆಗಟ್ಟಬಹುದು. ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಶಾಲೆಗಳಿಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ನೇರಳೆ, ಬೇವು, ಹೊಂಗೆ ಸೇರಿದಂತೆ ಇನ್ನಿತರ ಉಪಯುಕ್ತ ಗಿಡಗಳನ್ನು ವಿತರಿಸಲಾಗುತ್ತಿದೆ ಎಂದರು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಕಾರ್ಯಕ್ರಮದಲ್ಲಿ ಕೂನಬೇವು ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗ, ಸರ್ಕಾರಿ ಪ್ರೌಢಶಾಲೆಯ ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು.

ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
