ಚಿತ್ರದುರ್ಗ: ಜೂನ್ 15ಕ್ಕೆ ಕ್ರೈಸ್ ವಸತಿ ಶಾಲೆಗಳ ಅತಿಥಿ ಶಿಕ್ಷಕರ ಆಯ್ಕೆಗೆ ತರಗತಿ ಪ್ರಾತ್ಯಕ್ಷಿಕೆ

guest-teacher-recruitment

—Election Update—

ಚಿತ್ರದುರ್ಗ: ಜಿಲ್ಲೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಡಿಯಲ್ಲಿ ಬರುವ ವಿವಿಧ ವಸತಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಜೂನ್ 15ರಂದು ತರಗತಿ ಪ್ರಾತ್ಯಕ್ಷಿಕೆ (Demo Class) ಆಯೋಜಿಸಲಾಗಿದೆ. 2026-27ನೇ ಶೈಕ್ಷಣಿಕ ಸಾಲಿನ ನೇಮಕಾತಿ ಪ್ರಕ್ರಿಯೆ ಇದಾಗಿದ್ದು, ಈಗಾಗಲೇ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಈ ಪ್ರಕ್ರಿಯೆ ನಡೆಯಲಿದೆ.

ಜಿಲ್ಲೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈ ತಾತ್ಕಾಲಿಕ ನೇಮಕಾತಿ ನಡೆಯುತ್ತಿದೆ. ಅರ್ಜಿ ಸಲ್ಲಿಸಿರುವ ಶಿಕ್ಷಕ ಆಕಾಂಕ್ಷಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ನಿಗದಿತ ಸಮಯಕ್ಕೆ ಹಾಜರಾಗಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಭ್ಯರ್ಥಿಗಳು ತರಬೇಕಾದ ಮೂಲ ದಾಖಲೆಗಳು (Original Documents):

  • ಪದವಿ (Degree) ಅಂಕಪಟ್ಟಿಗಳು
  • ಬಿ.ಇಡಿ (B.Ed) ಅಂಕಪಟ್ಟಿಗಳು
  • ಟಿ.ಇ.ಟಿ (TET) ಉತ್ತೀರ್ಣ ಪ್ರಮಾಣಪತ್ರ
  • ಅನುಭವ/ಸೇವಾ ಪ್ರಮಾಣಪತ್ರ (ಇದ್ದಲ್ಲಿ)

ಗಮನಿಸಿ: ಅಭ್ಯರ್ಥಿಗಳು 2026ರ ಜೂನ್ 15ರ ಸೋಮವಾರ ಬೆಳಿಗ್ಗೆ 10.30ಕ್ಕೆ ಸರಿಯಾಗಿ ಆಯಾ ವಿಷಯಗಳಿಗೆ ನಿಗದಿಪಡಿಸಿದ ವಸತಿ ಶಾಲೆಗಳಿಗೆ ನೇರವಾಗಿ ಹಾಜರಾಗಬೇಕು.

विषಯವಾರು ಪ್ರಾತ್ಯಕ್ಷಿಕೆ ನಡೆಯುವ ಸ್ಥಳಗಳ ವಿವರ:

ವಿಷಯಗಳು ಪ್ರಾತ್ಯಕ್ಷಿಕೆ ನಡೆಯುವ ಸ್ಥಳ (ಕೇಂದ್ರ)
ಗಣಿತ, ವಿಜ್ಞಾನ, ಕಂಪ್ಯೂಟರ್ ಸೈನ್ಸ್, ಹಿಂದಿ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಗೂಳಯ್ಯನಹಟ್ಟಿ (ಸಾಮಾನ್ಯ-24)
ಇಂಗ್ಲಿಷ್, ಸಮಾಜ ವಿಜ್ಞಾನ, ದೈಹಿಕ ಶಿಕ್ಷಣ ಇಂದಿರಾ ಗಾಂಧಿ ವಸತಿ ಶಾಲೆ, ಸೀಬಾರ (ತುರುವನೂರು ರಸ್ತೆ), ಎನ್.ಹೆಚ್-4 ಕೇತೇಶ್ವರ ಮಠದ ಹತ್ತಿರ, ಚಿತ್ರದುರ್ಗ (ಪ. ವರ್ಗ-59)

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp