ಮಾಯಕೊಂಡ: ಆಸ್ತಿ ವ್ಯಾಜ್ಯಕ್ಕೆ ರಕ್ತಪಾತ; 70 ವರ್ಷದ ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ!

Author Picture
Published On: February 3, 2026
ಮಾಯಕೊಂಡ: ಆಸ್ತಿ ವ್ಯಾಜ್ಯಕ್ಕೆ ರಕ್ತಪಾತ mayakonda-property-dispute-brother-murder

—Advertisement—

ದಾವಣಗೆರೆ/ಮಾಯಕೊಂಡ: ಆಸ್ತಿ ಎಂಬ ಮಾಯೆ ಎಂತಹ ಸಂಬಂಧವನ್ನಾದರೂ ಕಡಿದು ಹಾಕುತ್ತದೆ ಎಂಬುದಕ್ಕೆ ಮಾಯಕೊಂಡದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಜಮೀನು ವಿವಾದದ ಹಿನ್ನೆಲೆಯಲ್ಲಿ ಅಣ್ಣನೇ ತಮ್ಮನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದ ದಾರುಣ ಘಟನೆ ಸೋಮವಾರ ನಡೆದಿದೆ.

ಮಾಯಕೊಂಡ ಗ್ರಾಮದ ನೀಲಪ್ಪ (68) ಕೊಲೆಯಾದ ದುರ್ದೈವಿ. ಸ್ವತಃ ಅಣ್ಣನಾದ ಪೂಜಾರ್ ಚಂದ್ರಪ್ಪ (70) ಎಂಬಾತನೇ ಈ ಕೃತ್ಯ ಎಸಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯ ವಿವರ:

ಅಣ್ಣ-ತಮ್ಮಂದಿರ ನಡುವೆ ಕಳೆದ ಹಲವು ವರ್ಷಗಳಿಂದ ಆಸ್ತಿ ಹಂಚಿಕೆ ವಿಚಾರವಾಗಿ ಜಗಳ ನಡೆಯುತ್ತಿತ್ತು. ಈ ಸಂಬಂಧ ನ್ಯಾಯಾಲಯದಲ್ಲಿ ವ್ಯಾಜ್ಯ ಕೂಡ ನಡೆಯುತ್ತಿದೆ. ಸೋಮವಾರ ಎಂದಿನಂತೆ ನೀಲಪ್ಪ ಅವರು ತಮ್ಮ ಜಮೀನಿನಲ್ಲಿ ಹಸು ಮೇಯಿಸಲು ತೆರಳಿದ್ದರು. ಈ ವೇಳೆ ಅಲ್ಲಿಗೆ ಬಂದ ಅಣ್ಣ ಚಂದ್ರಪ್ಪ ತಕರಾರು ತೆಗೆದಿದ್ದಾನೆ. ಮಾತುಕತೆ ವಿಕೋಪಕ್ಕೆ ತಿರುಗಿದಾಗ, ಸಿಟ್ಟಿಗೆದ್ದ ಚಂದ್ರಪ್ಪ ಮಾರಕಾಸ್ತ್ರಗಳಿಂದ ತಮ್ಮನ ಮೇಲೆ ಹಲ್ಲೆ ನಡೆಸಿದ್ದಾನೆ.

ತಲೆ ಮತ್ತು ದೇಹಕ್ಕೆ ತೀವ್ರ ಪೆಟ್ಟು ಬಿದ್ದ ಪರಿಣಾಮ ನೀಲಪ್ಪ ರಕ್ತದ ಮಡುವಿನಲ್ಲಿ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ನೀಲಪ್ಪರ ಪುತ್ರ ರಾಕೇಶ್ ಮತ್ತು ಸ್ನೇಹಿತರು, ಗಾಯಾಳುವನ್ನು ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಾಗೂ ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ದಾರಿ ಮಧ್ಯೆಯೇ ನೀಲಪ್ಪ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.

ಠಾಣೆ ಮುಂದೆ ಸಂಬಂಧಿಕರ ಆಕ್ರೋಶ:

ಘಟನೆಗೆ ಕೇವಲ ಚಂದ್ರಪ್ಪ ಮಾತ್ರವಲ್ಲ, ಆತನ ಕುಟುಂಬದ ಇತರರೂ ಕಾರಣ ಎಂದು ಮೃತರ ಸಂಬಂಧಿಕರು ಆರೋಪಿಸಿದ್ದಾರೆ. ನಾಲ್ವರ ವಿರುದ್ಧ ದೂರು ನೀಡಿದ್ದರೂ, ಪೊಲೀಸರು ಕೇವಲ ಚಂದ್ರಪ್ಪನ ವಿರುದ್ಧ ಮಾತ್ರ ದೂರು ದಾಖಲಿಸಿಕೊಂಡಿದ್ದಾರೆ ಎಂದು ಆರೋಪಿಸಿ ಮೃತರ ಸಂಬಂಧಿಕರು ಮಂಗಳವಾರ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು.

ಡಿವೈಎಸ್‌ಪಿ ಭರವಸೆ:

“ಪ್ರಕರಣದಲ್ಲಿ ಭಾಗಿಯಾಗಿರುವ ಯಾವೊಬ್ಬ ಆರೋಪಿಯನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು.”

ಬಿ.ಎಸ್. ಬಸವರಾಜ, ಡಿವೈಎಸ್‌ಪಿ

ಸ್ಥಳಕ್ಕೆ ಭೇಟಿ ನೀಡಿದ ಡಿವೈಎಸ್‌ಪಿ ಬಿ.ಎಸ್. ಬಸವರಾಜ ಅವರು ಪ್ರತಿಭಟನಾಕಾರರೊಂದಿಗೆ ಮಾತನಾಡಿ ಪರಿಸ್ಥಿತಿ ತಿಳಿಗೊಳಿಸಿದರು. ಪ್ರಸ್ತುತ ಸಿಪಿಐ ರಾಘವೇಂದ್ರ ಮತ್ತು ಪಿಎಸ್‌ಐ ಅಜ್ಜಪ್ಪ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

madhayakarnatakalive@gmail.com

"ಮಧ್ಯ ಕರ್ನಾಟಕ ಲೈವ್ (Madhyakarnataka.live) ಕರ್ನಾಟಕದ ಹೃದಯಭಾಗದ ನೈಜ, ನಿಖರ ಮತ್ತು ಕ್ಷಣ ಕ್ಷಣದ ಸುದ್ದಿಗಳಿಗಾಗಿ ಮೀಸಲಾದ ಡಿಜಿಟಲ್ ಸುದ್ದಿ ವೇದಿಕೆಯಾಗಿದೆ. ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಮಧ್ಯ ಕರ್ನಾಟಕದ ಜಿಲ್ಲೆಗಳ ಸ್ಥಳೀಯ ಸಮಸ್ಯೆಗಳು, ರಾಜಕೀಯ, ಕೃಷಿ, ಶಿಕ್ಷಣ ಮತ್ತು ಸಾಂಸ್ಕೃತಿಕ ವಿದ್ಯಮಾನಗಳನ್ನು ಜಗತ್ತಿಗೆ ತಲುಪಿಸುವುದು ನಮ್ಮ ಗುರಿ. ನಾವು ಕೇವಲ ಸುದ್ದಿಯನ್ನಷ್ಟೇ ಅಲ್ಲ, ಜನರ ಧ್ವನಿಯಾಗಲು ಬಯಸುತ್ತೇವೆ."… Read More

Related News

Leave a Comment

Home
Web Stories
Instagram
WhatsApp