ಚಿತ್ರದುರ್ಗ : ಹೆಣ್ಣು ಅನಾಫಿಲಿಸ್ ಸೊಳ್ಳೆಗಳು ರಾತ್ರಿ ವೇಳೆ ಕಚ್ಚುವುದರಿಂದ ಮಲೇರಿಯಾ ರೋಗ ಹರಡುತ್ತದೆ. ಈ ಕುರಿತು
ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಬಿ.ವಿ. ಗಿರೀಶ್ ಹೇಳಿದರು.
ಚಿತ್ರದುರ್ಗ ತಾಲ್ಲೂಕಿನ ಪಂಡರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈಚೆಗೆ ಆರೋಗ್ಯ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಜಾಗೃತಿಗಾಗಿ ನಿಯೋಜನೆಗೊಂಡಿರುವ ರಾಘವೇಂದ್ರ ನಸಿರ್ಂಗ್ ಸ್ಕೂಲ್, ವೆಂಕಟೇಶ್ವರ ಕಾಲೇಜ್ ಹಾಗೂ ಅಮೃತ ಆಯುರ್ವೇದಿಕ್ ಕಾಲೇಜಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕೆರೆಕಟ್ಟೆಗಳು, ಬಾವಿಗಳು ಹಾಗೂ ಜಾನುವಾರುಗಳ ಹೆಜ್ಜೆ ಗುರುತುಗಳಲ್ಲಿ ನಿಲ್ಲುವ ನೀರು ಹೆಣ್ಣು ಅನಾಫಿಲಿಸ್ ಸೊಳ್ಳೆಗಳ ಪ್ರಮುಖ ಉತ್ಪತ್ತಿ ತಾಣಗಳಾಗಿವೆ. ತೀವ್ರ ಚಳಿ ಜ್ವರ, ತಲೆನೋವು, ನಡುಕ ಮತ್ತು ವಾಕರಿಕೆ ಮಲೇರಿಯಾದ ಪ್ರಮುಖ ಲಕ್ಷಣಗಳಾಗಿದ್ದು, ರೋಗಕ್ಕೆ ನಿಗದಿತ ಚಿಕಿತ್ಸೆ ಲಭ್ಯವಿದೆ. ಆದ್ದರಿಂದ ಯಾವುದೇ ರೀತಿಯ ಜ್ವರ ಬಂದರೂ ತಕ್ಷಣವೇ ರಕ್ತ ಪರೀಕ್ಷೆ ಮಾಡಿಸಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.

ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ ಮಾತನಾಡಿ, ಮಲೇರಿಯಾ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಜೂನ್ ತಿಂಗಳಿನಲ್ಲಿ ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆಯನ್ನು ಆಚರಿಸಲಾಗುತ್ತದೆ. ಸಾರ್ವಜನಿಕರು ಕೀಟಜನ್ಯ ರೋಗಗಳ ಬಗ್ಗೆ ಜಾಗೃತಿ ಹೊಂದಿ, ಸಮುದಾಯದ ಸಹಭಾಗಿತ್ವದೊಂದಿಗೆ ನಾವೀನ್ಯತೆ ವಿಧಾನಗಳನ್ನು ಅನುಸರಿಸಿ ಮಲೇರಿಯಾ ನಿರ್ಮೂಲನೆಗೆ ಶ್ರಮಿಸಬೇಕು ಎಂದರು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ವಿದ್ಯಾರ್ಥಿಗಳು ತಮ್ಮ ಮುಂದಿನ ವೃತ್ತಿ ಜೀವನದಲ್ಲಿ ಮಾಹಿತಿ, ಶಿಕ್ಷಣ ಮತ್ತು ಸಂವಹನದ ಮೂಲಕ ಆರೋಗ್ಯ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು. ಸಾರ್ವಜನಿಕರಲ್ಲಿರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿ, ನೈಜ ಮಾಹಿತಿ ನೀಡಿ ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಳ್ಳುವಂತೆ ಪ್ರೇರೇಪಿಸಬೇಕು. ಚಿಕಿತ್ಸೆಗಾಗಿ ಬರುವ ಸಾರ್ವಜನಿಕರನ್ನು ಆಸಕ್ತಿ, ತಾಳ್ಮೆ ಮತ್ತು ಸಹಾನುಭೂತಿಯಿಂದ ಉಪಚರಿಸಿ, ಗೊಂದಲವಿಲ್ಲದೆ ವಿನಯದಿಂದ ಸಂವಹನ ನಡೆಸಬೇಕು ಎಂದು ಕಿವಿಮಾತು ಹೇಳಿದರು.

ಪಂಡರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಅಕ್ಷತಾ ಮಾತನಾಡಿ, ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸಂಜೆ ವೇಳೆ ಮನೆಯ ಮುಂದೆ ಬೇವಿನ ಸೊಪ್ಪಿನ ಹೊಗೆ ಹಾಕುವುದು, ನಿಂತ ನೀರಲ್ಲಿ ಸೊಳ್ಳೆಗಳ ಲಾರ್ವಾಗಳನ್ನು ತಿನ್ನುವ ಜೈವಿಕ ನಿಯಂತ್ರಕಗಳಾದ ಗಪ್ಪಿ ಮತ್ತು ಗಂಭೂಸಿಯಾ ಮೀನುಗಳನ್ನು ಬಿಡುವ ಮೂಲಕ ಸೊಳ್ಳೆಗಳ ಉತ್ಪತ್ತಿಯನ್ನು ತಡೆಗಟ್ಟಬಹುದು. ಮಲಗುವಾಗ ಕಡ್ಡಾಯವಾಗಿ ಸೊಳ್ಳೆ ಪರದೆಗಳನ್ನು ಬಳಸಿ ಸೊಳ್ಳೆ ಕಡಿತದಿಂದ ರಕ್ಷಣೆ ಪಡೆಯಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಘವೇಂದ್ರ ನಸಿರ್ಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೇಮಾ, ಬೋಧಕರಾದ ಪರ್ವೀನ್, ಪುನೀತ್, ಭೂಮಿಕಾ, ತೇಜಸ್ವಿನಿ ಹಾಗೂ ಹಿರಿಯ ಆರೋಗ್ಯ ನಿರೀಕ್ಷಕರಾದ ಆರ್. ಕೃಷ್ಣಪ್ಪ, ಸುರೇಶ್, ಹಿರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ ಮಮತಾ, ಫಾರ್ಮಸಿ ಅಧಿಕಾರಿ ವಿನಯ್, ಆಶಾ ಕಾರ್ಯಕರ್ತೆಯರು, ನಸಿರ್ಂಗ್ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
