ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

national-mission-edible-oil-oilseeds-subsidy

—Election Update—

ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ. ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.

ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.

ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp