ಹಾವೇರಿ: ಕುಟುಂಬ ವಿಭಜನೆ, ಹೊಸ ಮದುವೆ ಹಾಗೂ ಪ್ರತ್ಯೇಕ ವಾಸದ ಕಾರಣಗಳಿಂದಾಗಿ ಹೊಸ ಪಡಿತರ ಚೀಟಿಗಾಗಿ ಹಲವು ವರ್ಷಗಳಿಂದ ಕಾಯುತ್ತಿದ್ದ ಜಿಲ್ಲೆಯ ಬಡ ಕುಟುಂಬಗಳಿಗೆ ಕೊನೆಗೂ ಆಹಾರ ಇಲಾಖೆ ಸಿಹಿ ಸುದ್ದಿ ನೀಡಿದೆ. ಹಾವೇರಿ ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಹೊಸ ಬಿಪಿಎಲ್ (BPL) ಕಾರ್ಡ್‌ಗಳ ವಿತರಣಾ ಪ್ರಕ್ರಿಯೆಗೆ ಭರದಿಂದ ಚಾಲನೆ ನೀಡಿದ್ದು, ಅರ್ಹ ಫಲಾನುಭವಿಗಳ ಕೈಗೆ ಕಾರ್ಡ್‌ಗಳು ತಲುಪುತ್ತಿವೆ.
4 ಸಾವಿರಕ್ಕೂ ಹೆಚ್ಚು ಕಾರ್ಡ್ ವಿತರಣೆ:
ಜಿಲ್ಲೆಯಲ್ಲಿ ಹೊಸ ಬಿಪಿಎಲ್ ಕಾರ್ಡ್‌ಗಳಿಗಾಗಿ ಒಟ್ಟು ೯,೭೦೦ ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದವು. ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯನ್ನು ಪರಿಗಣಿಸಿ, ಇಲಾಖೆಯ ಅಧಿಕಾರಿಗಳು ಅರ್ಜಿಗಳ ಪರಿಶೀಲನೆ ಕಾರ್ಯವನ್ನು ತೀವ್ರಗೊಳಿಸಿದ್ದಾರೆ. ಈ ಪೈಕಿ ಈಗಾಗಲೇ ನಾಲ್ಕೂವರೆ ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಮಾನ್ಯ ಮಾಡಲಾಗಿದ್ದು, ೪,೦೦೦ ಕ್ಕೂ ಅಧಿಕ ಅರ್ಹ ಕುಟುಂಬಗಳಿಗೆ ಹೊಸ ಬಿಪಿಎಲ್ ಕಾರ್ಡ್‌ಗಳನ್ನು ಯಶಸ್ವಿಯಾಗಿ ವಿತರಿಸಲಾಗಿದೆ. ಉಳಿದ ಅರ್ಹ ಅರ್ಜಿಗಳ ಪರಿಶೀಲನೆಯೂ ವೇಗವಾಗಿ ನಡೆಯುತ್ತಿದ್ದು, ಶೀಘ್ರದಲ್ಲೇ ವಿತರಿಸಲಾಗುವುದು ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ಗ್ರಾಮೀಣ ಭಾಗದ ಜನರಿಗೆ ನಿರಾಳ:
ವಿಶೇಷವಾಗಿ ಗ್ರಾಮೀಣ ಪ್ರದೇಶದ ಬಡ ಕುಟುಂಬಗಳು ಹೊಸ ಕಾರ್ಡ್‌ಗಳಿಗಾಗಿ ಅರ್ಜಿ ಸಲ್ಲಿಸಿ ವರ್ಷಗಳಿಂದ ಚಾತಕ ಪಕ್ಷಿಯಂತೆ ಕಾಯುತ್ತಿದ್ದವು. ಇತ್ತೀಚಿನ ದಿನಗಳಲ್ಲಿ ಎಪಿಎಲ್‌ನಿಂದ ಬಿಪಿಎಲ್‌ಗೆ ವರ್ಗಾವಣೆ ಮಾಡಿಕೊಡುವಂತೆಯೂ ಇಲಾಖೆಗೆ ಅಪಾರ ಸಂಖ್ಯೆಯ ಅರ್ಜಿಗಳು ಬಂದಿದ್ದವು. ಇದೀಗ ಸರ್ಕಾರದ ಕಟ್ಟುನಿಟ್ಟಿನ ಮಾರ್ಗಸೂಚಿಗಳ ಅನ್ವಯ, ನೈಜ ಅರ್ಹರನ್ನು ಗುರುತಿಸಿ ಕಾರ್ಡ್ ವಿತರಿಸುತ್ತಿರುವುದು ಗ್ರಾಮೀಣ ಭಾಗದ ಜನರಲ್ಲಿ ಸಮಾಧಾನ ತಂದಿದೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ವಿವಿಧ ಯೋಜನೆಗಳಿಗೆ ಬಿಪಿಎಲ್ ಅತ್ಯಗತ್ಯ:
ಬಿಪಿಎಲ್ ಪಡಿತರ ಚೀಟಿಯು ಕೇವಲ ಮಾಸಿಕ ಉಚಿತ ಅಕ್ಕಿ ಮತ್ತು ಧಾನ್ಯಗಳನ್ನು ಪಡೆಯಲು ಮಾತ್ರ ಸೀಮಿತವಾಗಿಲ್ಲ. ಬದಲಿಗೆ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು, ಉಚಿತ ಆರೋಗ್ಯ ವಿಮೆ ಸೌಲಭ್ಯಗಳು, ಶೈಕ್ಷಣಿಕ ರಿಯಾಯಿತಿಗಳು ಹಾಗೂ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ (ಮಾಸಾಶನ) ಲಾಭವನ್ನು ಪಡೆಯಲು ಇದು ಅತ್ಯಂತ ಪ್ರಮುಖ ದಾಖಲೆಯಾಗಿದೆ. ಹೀಗಾಗಿ ಇಲಾಖೆಯು ವಿತರಣಾ ಪ್ರಕ್ರಿಯೆಯನ್ನು ಚುರುಕುಗೊಳಿಸಿರುವುದು ಬಡ ಕುಟುಂಬಗಳ ಆರ್ಥಿಕ ಮತ್ತು ಸಾಮಾಜಿಕ ಭದ್ರತೆಗೆ ದಾರಿಯಾಗಲಿದೆ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
