ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ಶುಕ್ರವಾರ ಬೆಳಗ್ಗೆ ರಾಜೀನಾಮೆ ಘೋಷಿಸುವ ಮೂಲಕ ಬಿಗ್ ಶಾಕ್ ನೀಡಿದ್ದಾರೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿ ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಮೊದಲ ವಿಕೆಟ್ ಪತನವಾಗಿದೆ.
ಬೆಂಗಳೂರಿನ ಕೋರಮಂಗಲದ ಕಚೇರಿಯಲ್ಲಿ ಇಂದು ಮಹತ್ವದ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ, ರಾಜೀನಾಮೆಯ ಹಿಂದಿನ ಅಸಲಿ ಕಾರಣಗಳನ್ನು ಮುಕ್ತವಾಗಿ ಬಿಚ್ಚಿಟ್ಟಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಖಾತೆಯ ಜವಾಬ್ದಾರಿಯನ್ನು ನಿರೀಕ್ಷಿಸಲಾಗಿತ್ತು. ಆದರೆ, ಅದು ಸಿಗದ ಕಾರಣ ಸಚಿವ ಸ್ಥಾನದಲ್ಲಿ ಮುಂದುವರಿಯಲು ಇಷ್ಟವಿಲ್ಲದೆ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ

ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
