ದಾವಣಗೆರೆ/ಹೊನ್ನಾಳಿ: “ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕದ ಗ್ರಾಮ ಪಂಚಾಯತ್ಗಳ ಅಧಿಕಾರವನ್ನು ಮೊಟಕುಗೊಳಿಸುವ ಅಥವಾ ದುರ್ಬಲಗೊಳಿಸುವ ಯಾವುದೇ ಪ್ರಯತ್ನವನ್ನು ರಾಜ್ಯ ಸರ್ಕಾರ ಸಹಿಸುವುದಿಲ್ಲ,” ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ.
ಹೊನ್ನಾಳಿ ತಾಲ್ಲೂಕಿನ ಹೆಚ್. ಗೋಪಗೊಂಡನಹಳ್ಳಿಯಲ್ಲಿ ನೂತನ ಗ್ರಾಮ ಪಂಚಾಯತ್ ಮತ್ತು ಅಂಗನವಡಿ ಕಟ್ಟಡಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಂಬರ್ 1 ಸ್ಥಾನದಲ್ಲಿದೆ ಕರ್ನಾಟಕ: ಪ್ರಿಯಾಂಕ್ ಖರ್ಗೆ
“ವಿಕೇಂದ್ರೀಕರಣ ಮತ್ತು ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಕರ್ನಾಟಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ ಎಂದು ಖುದ್ದು ಕೇಂದ್ರ ಸರ್ಕಾರದ ಅಧ್ಯಯನ ವರದಿಯೇ ಹೇಳಿದೆ. ಹೀಗಿರುವಾಗ, ಹಳ್ಳಿಗಳ ಉದ್ಯೋಗದ ಹಕ್ಕನ್ನು ಮತ್ತು ಪಂಚಾಯತ್ಗಳ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಕಸಿದುಕೊಳ್ಳುವ ಕೇಂದ್ರದ ನೀತಿ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ,” ಎಂದು ಸಚಿವರು ಕಿಡಿಕಾರಿದರು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ನರೇಗಾ ನಿಯಮ ಬದಲಾವಣೆಗೆ ವಿರೋಧ
ಕೇಂದ್ರದ ಹೊಸ ನಿಯಮಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಸಚಿವರು, ಈ ಕೆಳಗಿನ ಅಂಶಗಳನ್ನು ಪ್ರಸ್ತಾಪಿಸಿದರು:
- ನರೇಗಾ ಕೆಲಸಕ್ಕೆ ಬ್ರೇಕ್:
ಕೃಷಿ ಚಟುವಟಿಕೆಗಳ ಸಮಯದಲ್ಲಿ 60 ದಿನಗಳ ಕಾಲ ನರೇಗಾ (NREGA) ಕೆಲಸ ನಿಷೇಧಿಸಿರುವುದು ಗ್ರಾಮೀಣ ಕಾರ್ಮಿಕರಿಗೆ ಮಾರಕ. - ಗುತ್ತಿಗೆದಾರರ ಹಾವಳಿ:
ನರೇಗಾ ಯೋಜನೆಯಲ್ಲಿ ಗುತ್ತಿಗೆದಾರರ ಹಸ್ತಕ್ಷೇಪಕ್ಕೆ ಅವಕಾಶ ನೀಡಿರುವುದು ಕಾರ್ಮಿಕರ ಹಿತಾಸಕ್ತಿಗೆ ಧಕ್ಕೆ ತಂದಿದೆ. - ಸ್ವಾಯತ್ತತೆಗೆ ಕತ್ತರಿ:
ಪಂಚಾಯತ್ಗಳಿಗಿದ್ದ ಸ್ವಾಯತ್ತತೆಯನ್ನು ಹೊಸ ಕಾಯ್ದೆಯ ಮೂಲಕ ನಿಯಂತ್ರಿಸಲು ಹೊರಟಿರುವುದು ಸರಿಯಲ್ಲ.
‘ಬಾಕಿ ಹಣ ಬಿಡುಗಡೆ ಮಾಡಿ’
ರಾಜ್ಯಕ್ಕೆ ಆಗುತ್ತಿರುವ ಆರ್ಥಿಕ ಅನ್ಯಾಯವನ್ನು ಸರಿಪಡಿಸುವಂತೆ ಸಚಿವರು ಒತ್ತಾಯಿಸಿದರು. 15ನೇ ಹಣಕಾಸು ಆಯೋಗದ ಅನುದಾನ, ಜಲಜೀವನ್ ಮಿಷನ್ (JJM) ಪಾಲಿನ ಹಣ ಹಾಗೂ ನರೇಗಾ ಬಾಕಿ ಹಣವನ್ನು ಕೇಂದ್ರ ಸರ್ಕಾರ ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.
ಐದು ಗ್ಯಾರಂಟಿಗಳ ಬಲ: ರಾಜ್ಯದ ಐದು ಗ್ಯಾರಂಟಿ ಯೋಜನೆಗಳಿಂದ ಕೋಟ್ಯಂತರ ಕುಟುಂಬಗಳು ಆರ್ಥಿಕ ಶಕ್ತಿಯನ್ನು ಪಡೆದಿವೆ. ಇದು ಸಾಮಾಜಿಕ ಸಮಾನತೆ ಸಾಧಿಸುವಲ್ಲಿ ರಾಜ್ಯಕ್ಕೆ ಆನೆಬಲ ತಂದಿದೆ ಎಂದು ಖರ್ಗೆ ಅಭಿಪ್ರಾಯಪಟ್ಟರು.
ಗಣ್ಯರ ಉಪಸ್ಥಿತಿ: ಕಾರ್ಯಕ್ರಮದಲ್ಲಿ ಶಾಸಕ ಜಿ.ಡಿ. ಶಾಂತನಗೌಡ, ವಿಧಾನ ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್, ಡಿ.ಎಸ್. ಅರುಣ್, ಡಾ. ಧನಂಜಯ್ ಸರ್ಜಿ, ಬಯಲು ಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಬಿ. ಮಂಜಪ್ಪ, ಮಾಜಿ ಶಾಸಕ ಡಾ. ಗಂಗಪ್ಪ, ಡಿಸಿ ಜಿ.ಎಂ. ಗಂಗಾಧರಸ್ವಾಮಿ, ಜಿ.ಪಂ ಸಿಇಒ ಗಿತ್ತೆ ಮಾಧವ್ ವಿಠ್ಠಲ ರಾವ್ ಹಾಗೂ ಇತರರು ಉಪಸ್ಥಿತರಿದ್ದರು.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
madhayakarnatakalive@gmail.com
