ಬೆಂಗಳೂರು: ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್ ಶಾಮನೂರು ಹಾಗೂ ಉಮೇಶ್ ಅವರು ಇಂದು ಶಾಸಕರಾಗಿ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದರು. ವಿಧಾನಸಭೆಯ ಸ್ಪೀಕರ್ ಅವರ ಸಮ್ಮುಖದಲ್ಲಿ ಈ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಜರುಗಿತು.
ಅಜ್ಜನ ಹೆಸರಿನಲ್ಲಿ ಪ್ರಮಾಣ ಮಾಡಿದ ಸಮರ್ಥ್:
ಈ ವೇಳೆ ದಾವಣಗೆರೆ ಭಾಗದ ಯುವ ನಾಯಕ ಸಮರ್ಥ್ ಶಾಮನೂರು ಅವರು ಪ್ರಮಾಣವಚನ ಸ್ವೀಕರಿಸಿದ ರೀತಿ ಗಮನ ಸೆಳೆಯಿತು. “ವಿಧಾನಸಭೆಯ ಸದಸ್ಯನಾಗಿ ನಿರ್ವಾಚನ ಹೊಂದಿದವನಾಗಿ, ವಿಧಿ ದ್ವಾರಾ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ಶ್ರದ್ಧೆ ಮತ್ತು ನಿಷ್ಠೆಯಿಂದ ಕೂಡಿರುತ್ತೇನೆ” ಎಂದು ಹೇಳಿದ ಅವರು, “ಶ್ರೀ ಕಲ್ಲೇಶ್ವರ ಸ್ವಾಮಿ, ಭಗವಂತ ಹಾಗೂ ನನ್ನ ಪೂಜ್ಯ ಅಜ್ಜ ಡಾ. ಶಾಮನೂರು ಶಿವಶಂಕರಪ್ಪನವರ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ” ಎಂದು ಶ್ರದ್ಧಾಪೂರ್ವಕವಾಗಿ ತಮ್ಮ ಜವಾಬ್ದಾರಿಯನ್ನು ಸ್ವೀಕರಿಸಿದರು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಉಮೇಶ್ ಅವರಿಂದಲೂ ಪ್ರಮಾಣ ವಚನ:
ಸಮರ್ಥ್ ಶಾಮನೂರು ಅವರೊಂದಿಗೆ, ಮತ್ತೋರ್ವ ನೂತನ ಶಾಸಕ ಉಮೇಶ್ ಅವರು ಕೂಡ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು. ಉಭಯ ನಾಯಕರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸ್ಪೀಕರ್ ಹಾಗೂ ನೆರೆದಿದ್ದ ಗಣ್ಯರು ಅವರಿಗೆ ಶುಭಾಶಯ ಕೋರಿದರು.
ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ನೋಡ್ತಾ ಇರಿ: [Madhyakarnataka.live]
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
