ದಾವಣಗೆರೆ ದಕ್ಷಿಣದಲ್ಲಿ ಬದಲಾವಣೆಯ ಪರ್ವ: “ಅಭಿವೃದ್ಧಿಗಾಗಿ ಈ ಬಾರಿ ನನಗೆ ಮತ ನೀಡಿ” – ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ

Srinivas Dasakariyappa, BJP candidate for Davanagere South Assembly constituency, during an election interview.

—Election Update—

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಕಾಂಗ್ರೆಸ್ ಭದ್ರಕೋಟೆಯನ್ನು ಭೇದಿಸಲು ಬಿಜೆಪಿ ಸಜ್ಜಾಗಿದ್ದು, ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ಕ್ಷೇತ್ರದಾದ್ಯಂತ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇತ್ತೀಚೆಗೆ ನಡೆದ ವಿಶೇಷ ಸಂದರ್ಶನದಲ್ಲಿ ಅವರು ಕ್ಷೇತ್ರದ ಸಮಸ್ಯೆಗಳು ಹಾಗೂ ತಮ್ಮ ಮುಂದಿನ ಗುರಿಗಳ ಬಗ್ಗೆ ನೇರ ಮಾತುಗಳನ್ನಾಡಿದ್ದಾರೆ.

ಕ್ಷೇತ್ರದ ಅಭಿವೃದ್ಧಿ ಶೂನ್ಯ: ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಸಂದರ್ಶನದಲ್ಲಿ ಮಾತನಾಡಿದ ಶ್ರೀನಿವಾಸ್ ದಾಸಕರಿಯಪ್ಪ, “2008ರ ಡಿಲಿಮಿಟೇಶನ್ ನಂತರ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಯಾವುದೇ ನೈಜ ಅಭಿವೃದ್ಧಿ ನಡೆದಿಲ್ಲ. ಶಿಕ್ಷಣ, ಆರೋಗ್ಯ ಮತ್ತು ರಸ್ತೆಗಳ ಸ್ಥಿತಿ ಹದಗೆಟ್ಟಿದೆ. ಕಾಂಗ್ರೆಸ್ ಕೇವಲ ರಸ್ತೆಗಳಿಗೆ ‘ತ್ಯಾಪೆ’ ಹಾಕುವ ಕೆಲಸ ಮಾಡಿದೆ ಹೊರತು ಶಾಶ್ವತ ಪರಿಹಾರ ನೀಡಿಲ್ಲ. ಇಲ್ಲಿನ ಬಡಜನತೆ ಇಂದಿಗೂ ಮೂಲಭೂತ ಸೌಕರ್ಯಗಳಿಗಾಗಿ ಪರದಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ಯಾರಂಟಿ ಯೋಜನೆಗಳು ಜನರನ್ನು ಸೋಮಾರಿ ಮಾಡುತ್ತಿವೆ!

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಕಟುವಾಗಿ ಟೀಕಿಸಿದ ಅವರು, “ಕೇವಲ ₹2,000 ನೀಡುವುದರಿಂದ ಕುಟುಂಬದ ಉದ್ಧಾರವಾಗದು. ಇದು ಯುವಕರನ್ನು ಸೋಮಾರಿಗಳನ್ನಾಗಿ ಮಾಡುತ್ತಿದೆ. ಪ್ರತಿ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿ ಮಾಡಿದ್ದರೆ ಜನ ಗೌರವದಿಂದ ಬದುಕುತ್ತಿದ್ದರು. ಗ್ಯಾರಂಟಿ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಿನಿಯೋಗಿಸುತ್ತಿದ್ದರೂ ಜನರಿಗೆ ಅದರ ನಿಜವಾದ ಲಾಭ ತಲುಪುತ್ತಿಲ್ಲ” ಎಂದರು.

ಈ ಬಾರಿ ಅಲ್ಪಸಂಖ್ಯಾತರ ಒಲವು ಬಿಜೆಪಿಯತ್ತ?

ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಬೆಂಬಲದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಕಾಂಗ್ರೆಸ್ ಇಷ್ಟು ದಿನ ಬಿಜೆಪಿಯ ಬಗ್ಗೆ ಮುಸ್ಲಿಂ ಬಾಂಧವರಲ್ಲಿ ಭಯ ಹುಟ್ಟಿಸಿತ್ತು. ಆದರೆ 2014ರ ನಂತರ ಮೋದಿಯವರ ಆಡಳಿತದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂಬುದು ಎಲ್ಲರಿಗೂ ತಿಳಿದಿದೆ. ಈಗ ಅಲ್ಪಸಂಖ್ಯಾತರು ಕೂಡ ನಮ್ಮನ್ನು ಪ್ರೀತಿಯಿಂದ ಸ್ವಾಗತಿಸುತ್ತಿದ್ದಾರೆ, ಈ ಬಾರಿ ಅವರು ಬದಲಾವಣೆ ಬಯಸಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನನ್ನ ಕನಸು: ಮಾದರಿ ದಾವಣಗೆರೆ ದಕ್ಷಿಣ

“ನಾನು ಈ ಕ್ಷೇತ್ರದ ಮಗ. ಕಳೆದ 23 ವರ್ಷಗಳಿಂದ ನೀವು ಬೇರೆಯವರನ್ನು ನೋಡಿದ್ದೀರಿ, ಈ ಬಾರಿ ನಿಮ್ಮ ಸೇವಕನಾಗಿ ಕೆಲಸ ಮಾಡಲು ನನಗೆ ಒಂದು ಅವಕಾಶ ನೀಡಿ. 224 ಕ್ಷೇತ್ರಗಳಲ್ಲಿ ದಾವಣಗೆರೆ ದಕ್ಷಿಣವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಸಂಕಲ್ಪ. ಬಡತನ ನಿರ್ಮೂಲನೆ ಮತ್ತು ಯುವಕರಿಗೆ ಉದ್ಯೋಗ ನೀಡುವುದು ನನ್ನ ಮೊದಲ ಆದ್ಯತೆ” ಎಂದು ಅವರು ಮತದಾರರಲ್ಲಿ ಮನವಿ ಮಾಡಿದರು.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp