ತಮ್ಮ ತಂದೆ, ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟಿಕೆಟ್ ಹಂಚಿಕೆ ವಿಚಾರದಲ್ಲಿ ಹಬ್ಬಿರುವ ವದಂತಿಗಳನ್ನು ತಳ್ಳಿಹಾಕಿದರು.
ಜಬ್ಬಾರ್ ವಿರುದ್ಧ ಅಸಮಾಧಾನ
ಮುಸ್ಲಿಮರಿಗೆ ಟಿಕೆಟ್ ನೀಡುವ ಭರವಸೆಯನ್ನು ಶಾಮನೂರು ಶಿವಶಂಕರಪ್ಪ ನೀಡಿದ್ದಾರೆ ಎಂದು ಹೇಳುತ್ತಿರುವುದು ಕೇವಲ ಜಬ್ಬಾರ್ ಒಬ್ಬರೇ ಎಂದು ಮಲ್ಲಿಕಾರ್ಜುನ್ ಕಿಡಿಕಾರಿದ್ದಾರೆ. ಈ ವಿಚಾರವಾಗಿ ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಸುಳ್ಳು ಹೇಳಿಕೆಗಳನ್ನು ನೀಡಿ ಮತದಾರರಲ್ಲಿ ಗೊಂದಲ ಮೂಡಿಸುವುದು ಸರಿಯಲ್ಲ ಎಂದು ಅವರು ಎಚ್ಚರಿಸಿದರು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಮನೆಯಲ್ಲೇ ಬಗೆಹರಿಯಲಿದೆ ಗೊಂದಲ
ಕಾಂಗ್ರೆಸ್ ಪಕ್ಷದ ನಾಯಕರೆಲ್ಲರೂ ಒಂದೇ ಕುಟುಂಬದವರಿದ್ದಂತೆ. ಪಕ್ಷದ ಆಂತರಿಕ ವಿಚಾರಗಳನ್ನು ಅಥವಾ ಗೊಂದಲಗಳನ್ನು ನಾವೆಲ್ಲರೂ ಕುಳಿತು ಚರ್ಚಿಸಿ ಬಗೆಹರಿಸಿಕೊಳ್ಳುತ್ತೇವೆ ಹೊರತು ಬೀದಿಯಲ್ಲಿ ಗೊಂದಲ ಮಾಡುವುದಿಲ್ಲ ಎಂದು ಒಗ್ಗಟ್ಟಿನ ಮಂತ್ರ ಜಪಿಸಿದರು. ಕೆಟ್ ಹಂಚಿಕೆಯಂತಹ ಪ್ರಮುಖ ನಿರ್ಧಾರಗಳನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದರು.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
