ಬೆಂಗಳೂರು : ಮೂರನೇ ಹಂತದ SIR (ಸ್ಪೆಷಲ್ ಇಂಟೆನ್ಸಿವ್ ರಿವಿಜನ್) ಕುರಿತು ಭಾರತದ ಚುನಾವಣಾ ಆಯೋಗ ಆದೇಶ ನೀಡಿದೆ. ಈ ಹಂತಗಳಲ್ಲಿ ಕರ್ನಾಟಕ ಸೇರಿದಂತೆ ದೇಶದ 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಲಾಗುತ್ತದೆ.
ಕರ್ನಾಟಕದಲ್ಲಿ ಜೂನ್ 30ರಿಂದ ಜುಲೈ 29ರವರೆಗೆ, BLO ಮತ್ತು BLAಗಳು ಮನೆ ಮನೆಗೆ ಭೇಟಿ ನೀಡಿ ವಿವರಗಳನ್ನು ಸಂಗ್ರಹಿಸಲಿದ್ದಾರೆ. ಕರ್ನಾಟಕದ ರಾಜ್ಯದಲ್ಲಿ ಆಗಸ್ಟ್ 5ರಂದು ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.
ಯಾವ ರಾಜ್ಯಗಳಲ್ಲಿ SIR ಪ್ರಕ್ರಿಯೆ ನಡೆಯಲಿದೆ?
ಕರ್ನಾಟಕದ ಜೊತೆಗೆ ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಹರಿಯಾಣ, ಪಂಜಾಬ್, ಒಡಿಶಾ, ಜಾರ್ಖಂಡ್, ಉತ್ತರಾಖಂಡ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಈ ಪರಿಷ್ಕರಣೆ ನಡೆಯಲಿದೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ದೆಹಲಿ, ಚಂಡೀಗಢ ಸೇರಿದಂತೆ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲೂ ಈ ಕಾರ್ಯ ನಡೆಯಲಿದೆ. ಆದರೆ, ಪ್ರತಿಕೂಲ ಹವಾಮಾನ ಮತ್ತು ಹಿಮಪಾತದ ಕಾರಣದಿಂದ ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ ಮತ್ತು ಲಡಾಖ್ನಲ್ಲಿ ಈ ಪ್ರಕ್ರಿಯೆಯನ್ನು ಸದ್ಯಕ್ಕೆ ಮುಂದೂಡಲಾಗಿದೆ.
ಕರ್ನಾಟಕದಲ್ಲಿ SIR ಪ್ರಕ್ರಿಯೆ ಯಾವಾಗ ಆರಂಭ?
ಕರ್ನಾಟಕಕ್ಕೆ ಅಕ್ಟೋಬರ್ 1 ಅನ್ನು ಅರ್ಹತಾ ದಿನಾಂಕವಾಗಿ ನಿಗದಿಪಡಿಸಲಾಗಿದೆ. ಜೂನ್ 20ರಿಂದ 29’ರವರೆಗೆ ನಮೂನೆಗಳ ಸಿದ್ಧತೆ ನಡೆಯಲಿದ್ದು, ಜೂನ್ 30ರಿಂದ ಜುಲೈ 29ರವರೆಗೆ BLOಗಳು ಮನೆಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಆಗಸ್ಟ್ 5ರಿಂದ ಸೆಪ್ಟೆಂಬರ್ 3ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಇರುತ್ತದೆ. ಇವುಗಳ ವಿಲೇವಾರಿ ಪ್ರಕ್ರಿಯೆ ಅಕ್ಟೋಬರ್ 3ರವರೆಗೆ ನಡೆಯಲಿದ್ದು, ಅಂತಿಮ ಮತದಾರರ ಪಟ್ಟಿ ಅ.7ರಂದು ಪ್ರಕಟವಾಗಲಿದೆ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
